ಅಭಿಪ್ರಾಯ / ಸಲಹೆಗಳು

ಸಂಸ್ಥೆಯ ಕುರಿತ ವಿವರ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕುರಿತ ವಿವರ:-

 

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು (ಕೇಂದ್ರ ಪುರಸ್ಕೃತ ಯೋಜನೆಯಡಿ) 3ನೇ ಹಂತದಲ್ಲಿ ಪ್ರತಿ ವೈದ್ಯಕೀಯ ಕಾಲೇಜಿಗೆ ರೂ.325.00 ಕೋಟಿಗಳ ವೆಚ್ಚದಲ್ಲಿ ದೇಶದಾದ್ಯಂತ 75 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಕೇಂದ್ರ ಪುರಸ್ಕೃತ ಯೋಜನೆ ಜಾರಿಗೊಳಿಸಿದೆ.

ಈ ಯೋಜನೆಯಡಿ ಕರ್ನಾಟಕ ಸರ್ಕಾರವು ತಾಂತ್ರಿಕ ಮೌಲ್ಯಮಾಪನ ಸಮಿತಿಗೆ ದಿನಾಂಕ: 08/09/2019 ರಂದು ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಿದೆ. ನಂತರ ಯೋಜನಾ ವರದಿಯನ್ನು ಪರಿಶೀಲಿಸಿ, ಚಿಕ್ಕಮಗಳೂರು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು 60:40 ಅನುಪಾತದಲ್ಲಿ ವೆಚ್ಚ ಭರಿಸಿ ಸ್ಥಾಪಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ದಿನಾಂಕ: 23/10/2019 ರಂದು ಕೇಂದ್ರ ಸಚಿವಾಲಯವು ಅನುಮೋದನೆ ನೀಡಿತು.

ಭಾರತ ಸರ್ಕಾರವು ತನ್ನ ಪಾಲಿನ ರೂ.195 ಕೋಟಿಗಳಲ್ಲಿ ದಿನಾಂಕ:15/11/2019 ರಂದು ರೂ.23 ಕೋಟಿಗಳು ಹಾಗೂ ದಿನಾಂಕ:10/06/2020 ರಂದು ರೂ.27 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಅದೇ ರೀತಿ ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆಯನ್ನು ನೀಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆಗಳ ಜೊತೆಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಕುರಿತ ಕೇಂದ್ರ ಪುಸ್ಕೃತ ಯೋಜನೆಯನ್ನು ಅನುಷ್ಟಾನಗೊಳಿಸುವುದೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಯೋಜನೆಯ ಮೊದಲನೇ ಹಂತದಲ್ಲಿ 2014 ರಲ್ಲಿ 58 ಹೊಸ ವೈದ್ಯಕೀಯ ಕಾಲೇಜುಗಳನ್ನು ಒಟ್ಟು ರೂ. 10,962/- ಕೋಟಿಗಳ ವೆಚ್ಚದಲ್ಲಿ ಪ್ರಾರಂಭಿಸಲಾಗಿದ್ದು. ಇದರಲ್ಲಿ ಕೇಂದ್ರ ಸರ್ಕಾರವು ತನ್ನ ಪಾಲಿನ ಒಟ್ಟು ರೂ.7541 ಕೋಟಿಗಳನ್ನು ಬಿಡುಗಡೆ ಮಾಡಿದೆ.

ಪ್ರತಿ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಕನಿಷ್ಠ ಸೌಲಭ್ಯ ಹೊಂದಿರುವ ಒಂದು ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಯೋಜನೆಯ ಎರಡನೇ ಹಂತದಲ್ಲಿ ಪ್ರತಿ ಮೆಡಿಕಲ್ ಕಾಲೇಜಿಗೆ ರೂ.250 ಕೋಟಿಗಳಂತೆ ಒಟ್ಟು ರೂ.6000 ಕೋಟಿಗಳ ವೆಚ್ಚದಲ್ಲಿ 24 ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅನುಮೋದನೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಂತೆ 1000 ಜನ ಸಂಖ್ಯೆಗೆ ಒಬ್ಬ ವೈದ್ಯರ ಅಗತ್ಯವಿದೆ. ಪ್ರಸ್ತುತ ಕರ್ನಾಟಕದಲ್ಲಿ ಪ್ರತಿ 1700 ಜನಸಂಖ್ಯೆಗೆ ಒಬ್ಬ ವೈದ್ಯರ ಸೇವೆ ನೀಡಲಾಗುತ್ತಿದೆ. ಆದ್ದರಿಂದ ವಿಶ್ವ ರೋಗ್ಯ ಸಂಸ್ಥೆಯ ಮಾರ್ಗ ಸೂಚಿಯಂತೆ ವೈದ್ಯಕೀಯ ಸೇವೆ ಒದಗಿಸಲು ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ತೆರೆಯುವ ಅಗತ್ಯವಿದೆ. ಮುಂದುವರಿದು ಈ ಕುರಿತು ವಿಶ್ಲೇಷಿಸಿದಾಗ ಗ್ರಾಮೀಣ ಪ್ರದೇಶದಲ್ಲಿ ಶೇ.80 ರಷ್ಟು ಜನಸಂಖ್ಯೆ ಇದ್ದು, ಈ ಭಾಗದಲ್ಲಿ ಶಿಶು ಹಾಗೂ ತಾಯಿ ಮರಣ ಪ್ರಮಾಣ ಹೆಚ್ಚಾಗಿದೆ ಹಾಗೂ ವೈದ್ಯರ ಮತ್ತು ಜನ ಸಂಖ್ಯೆ ಅನುಪಾತ 1:2600 ಆಗಿದೆ.

ಹಲವು ವೈದ್ಯಕೀಯ ವಿಷಯಗಳಲ್ಲಿ ತಜ್ಞತೆ ಹೊಂದಿದ ವೈದ್ಯರು ನಗರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ ಚಿಕ್ಕಮಗಳೂರು ನಂತಹ ಜಿಲ್ಲೆಗಳಲ್ಲಿ ತಜ್ಞ ವೈದ್ಯರ ಕೊರತೆ ಕಂಡುಬರುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ವೈದ್ಯರ ಕೊರತೆಯಿದೆ. ಆದ್ದರಿಂದ ಈ ಕೊರತೆಯನ್ನು ನಿವಾರಿಸುವ ದೃಷ್ಟಿಯಿಂದ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ವೈದ್ಯಕೀಯ ಕಾಲೇಜು ಹಾಗೂ ಭಾರತೀಯ ವೈದ್ಯಕೀಯ ಪರಿಷತ್ತಿನ ಮಾರ್ಗ ಸೂಚಿಗಳಿಗನುಸಾರವಾಗಿ ಜಿಲ್ಲಾ ಆಸ್ಪತ್ರೆಗಳನ್ನು ಉನ್ನತೀಕರಣಗೊಳಿಸುವ ಅಗತ್ಯವಿದೆ.

ಚಿಕ್ಕಮಗಳೂರು ತಾಲ್ಲೂಕು, ತೇಗೂರು ಗ್ರಾಮದ ಸರ್ವೆ ನಂಬರ್ 138,192 ಹಾಗೂ 193 ಗಳಲ್ಲಿ ಒಟ್ಟು 30.2 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಾರಂಭಿಸಲಾಗುವುದು.

ಕರ್ನಾಟಕ ಸರ್ಕಾರದ ಸಚಿವ ಸಂಪುಟವು ದಿನಾಂಕ:15/06/2020 ರಂದು 150 ವಿದ್ಯಾರ್ಥಿಗಳ ದಾಖಲಾತಿ ಸಾಮಾರ್ಥ್ಯವುಳ್ಳ ವೈದ್ಯಕೀಯ ಕಾಲೇಜನ್ನು ರೂ. 438.75 ಕೋಟಿಗಳ ವೆಚ್ಚದಲ್ಲಿ ಪ್ರಾರಂಭಿಸಲು ಅನುಮೋದನೆ ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ವಿಭಾಗದಿಂದ ನೂತನ ಕಟ್ಟಡ ನಿರ್ಮಾಣಕ್ಕಾಗಿ ದಿನಾಂಕ:16/06/2020 ರಂದು ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ದಿನಾಂಕ: 23/10/2020 ರಂದು ಕಾರ್ಯಾದೇಶ ನೀಡಲಾಗಿದೆ.

ಈ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದರಿಂದ ಇಲ್ಲಿ ಆರೋಗ್ಯ ಸೇವೆಗಳ ವ್ಯವಸ್ಥೆ ಉತ್ತಮಗೊಳ್ಳಲಿದೆ. ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ   ಈ ಪ್ರದೇಶದ ಆರೋಗ್ಯ ಸೇವೆಗಳ ಚಿತ್ರಣವೇ ಬದಲಾಗಲಿದೆ. ಇದರಿಂದ ಇಲ್ಲಿನ ಜನರ ತಲಾ ಆದಾಯವು ಹೆಚ್ಚಾಗಲಿದೆ. ತೃತೀಯ ಹಂತದ ವೈದ್ಯಕೀಯ ಸೇವೆಗಳಿಗಾಗಿ ಬಡ ರೋಗಿಗಳು ದೂರದ ಪ್ರದೇಶಗಳಿಗೆ ಓಡಾಡುವುದು ತಪ್ಪಲಿದೆ. ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ಸೇವೆಯು ಸಹಾ ಈ ಪ್ರದೇಶದ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಪ್ರದೇಶದ ಜನರಿಗೂ ತೃತೀಯ ಹಂತದ ವೈದ್ಯಕೀಯ ಸೇವೆ ಲಭ್ಯವಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳ ರೋಗಿಗಳಿಗೆ ತೃತೀಯ ಹಂತದ ಆರೋಗ್ಯ ಸೇವೆಗಳು ರೋಗ ಪತ್ತೆ ವಿಧಾನಗಳೂ ಸೇರಿದಂತೆ ಎಲ್ಲಾ ತಜ್ಞತೆಯ ವಿಭಾಗಗಳಲ್ಲೂ ದಿನದ 24 ಗಂಟೆಯೂ ಲಭ್ಯವಾಗಲಿದೆ. 24*7 ತುರ್ತು ಚಿಕಿತ್ಸಾ ಸೇವೆ ಲಭ್ಯವಾಗಲಿದೆ.

ಇತ್ತೀಚಿನ ನವೀಕರಣ​ : 20-03-2021 11:22 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080